

ಬೆಳ್ತಂಗಡಿ: ಎಸ್ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಾಂಸ್ಕೃತಿಕ ಸಂಘ ವತಿಯಿಂದ ಓಣಂ ಪ್ರಯುಕ್ತ ಓಣಂ ಸಂಭ್ರಮ ಮತ್ತು ಸಾಂಪ್ರದಾಯಿಕ ದಿನವನ್ನು ಆಚರಿಸಲಾಯಿತು.
ಪ್ರಾಂಶುಪಾಲ ಸಂತೋಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಲೆಕ್ಟ್ರಾನಿಕ್ಸ್ ಮತ್ತು ಸಂವಹನ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಸಂಪತ್ ಓಣಂ ಆಚರಣೆಯ ಪ್ರಾಮುಖ್ಯತೆ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಓಣಂ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಉತ್ಸಾಹದಿಂದ ಭಾಗವಹಿಸಿದರು. ಸಾಂಸ್ಕೃತಿಕ ಸಂಘವು ಪೂಕಳಂ ಸ್ಪರ್ಧೆ ಮತ್ತು ಸಾಂಪ್ರದಾಯಿಕ ಉಡುಪು ಧರಿಸಿ ರ್ಯಾಂಪ್ ವಾಕ್ ನಡೆಯಿತು.