ಉಪ ಚುನಾವಣೆ ಮಾತ್ರವಲ್ಲ, ಮುಂದಿನ ಎಲ್ಲ ಚುನಾವಣೆಯಲ್ಲೂ ಗೆಲ್ತೀವಿ, ಮತ್ತೆ ಮೋದಿಯೇ ಪ್ರಧಾನಿ: ಬಿಎಸ್​ವೈ

BSY
Published on

ಶಿವಮೊಗ್ಗ: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪ ಚುನಾವಣೆ ಮಾತ್ರವಲ್ಲ, ಮುಂದಿನ ಎಲ್ಲ ಚುನಾವಣೆಗಳಲ್ಲೂ ನಾವೇ ಗೆಲ್ಲುತ್ತೇವೆ. ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರ ಜತೆ ಮಾತನಾಡಿದ ಸಿಎಂ, ಪ್ರಪಂಚ ಮೆಚ್ಚುವಂತಹ ಆಡಳಿತವನ್ನು ನರೇಂದ್ರ‌ ಮೋದಿಯವರು ನೀಡುತ್ತಿದ್ದಾರೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ‌ ಹಿಂದೆಂದೂ ಕಂಡರಿಯದ ಪ್ರವಾಹ ಬಂದಿದೆ. ಬೆಂಗಳೂರಿನಲ್ಲೂ ಭಾರಿ ಮಳೆಯಾಗಿ ಮನೆಗಳು ಜಲಾವೃತವಾಗಿವೆ. 600ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಯಾವ ಮನೆಗಳಿಗೆ ನೀರು ನುಗ್ಗಿದೆಯೋ ಅವರಿಗೆ 25 ಸಾವಿರ ಪರಿಹಾರ ನೀಡಲು ಸೂಚಿಸಿದ್ದೇನೆ. ನಿನ್ನೆ ಸಂಜೆಯಿಂದಲೇ ಪರಿಹಾರ ನೀಡುವ ಕಾರ್ಯ ಆರಂಭಗೊಂಡಿದೆ ಎಂದು ಹೇಳಿದರು.

ನವೆಂಬರ್ 17ರಿಂದ ರಾಜ್ಯದಲ್ಲಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುತ್ತೇವೆ. ಯಾರಿಗೆ ಆಸಕ್ತಿ ಇದೆಯೋ ಅವರು ಕಾಲೇಜಿಗೆ ಬರಬಹುದು ಎಂದೂ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net