ಶಿರಸಿ: ಗಾಂಜಾ ಸೇವಿಸಿದ ಬಗ್ಗೆ ವೈದ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬುಧವಾರ ಬಂಧಿಸಿದ್ದಾರೆ.
ಇಲ್ಲಿಯ ಗಣೇಶನಗರ ನಿವಾಸಿ ಪ್ರಜ್ವಲ್ ಗಿರೀಶ ದೇಶಭಂಡಾರಿ ಬಂಧಿತ ಆರೋಪಿ. ನಗರದ ಲಿಂಗದಕೋಣ ರಸ್ತೆ ಮೀನು ಮಾರುಕಟ್ಟೆ ಹಿಂಭಾಗದಲ್ಲಿ ಗಾಂಜಾ ಸೇವನೆ ಮಾಡಿರುವ ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.