

ದೇವದುರ್ಗ: ಪಟ್ಟಣದ ಗ್ಯಾರೇಜ್ ಮೇಲೆ ಬಾಲಕಾರ್ಮಿಕ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ, ಒಬ್ಬ ಬಾಲ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ:
ಪಟ್ಟಣದ ಕೆಇಬಿ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲು ಮಾಡಿ ಪಾಲಕರಿಗೆ ಒಪ್ಪಿಸಲಾಗಿದೆ. ಈ ಕುರಿತು ಪಟ್ಟಣ ಠಾಣೆಯಲ್ಲಿ ಗ್ಯಾರೇಜ್ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಕಾರ್ಮಿಕ ನಿರೀಕ್ಷಕ ಮಲ್ಲಪ್ಪ, ಶಿಕ್ಷಣ ಇಲಾಖೆ ಇಸಿಒ ರಾಜನಗೌಡ, ಗ್ರಾಮ ಆಡಳಿತಾಧಿಕಾರಿ ವೀರೇಶ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಕ್ಕಯ್ಯ ಇದ್ದರು.