ಖಾಸಗಿ ಬಸ್-ಆಟೋ ಡಿಕ್ಕಿಯಾಗಿ ಒಬ್ಬ ಸಾವು, 8 ಜನರಿಗೆ ಗಾಯ

18-GPT-4
ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಸಮೀಪ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.
Published on

ಗುಂಡ್ಲುಪೇಟೆ: ತಾಲೂಕಿನ ಮೂಡಗೂರು-ಬಲಚವಾಡಿ ಬಳಿ ಖಾಸಗಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ ಒಬ್ಚ ಮೃತಪಟ್ಟು ಚಾಲಕ ಸೇರಿ 7 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಲಚವಾಡಿ ಗ್ರಾಮದ ಮಹೇಶ್(57) ಮೃತರು. ಗುರುವಾರ ಮಧ್ಯಾಹ್ನ ಪಡಗೂರು ಕಡೆಗೆ ಹೋಗುತ್ತಿದ್ದ ಪ್ರಯಾಣಿಕರ ಆಟೋಗೆ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹೇಶ್ ಸೇರಿದಂತೆ 7 ಮಂದಿ ಗಾಯಗೊಂಡಿದ್ದರು. ಇವರ ಪೈಕಿ ಮಹೇಶ್ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಇನ್ನುಳಿದ ಪ್ರಯಾಣಿಕರನ್ನು ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಮಹೇಶ್
ಮೃತ ಮಹೇಶ್

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಹೊಯ್ಸಳ ಪೊಲೀಸರು ಘಟನೆಯಲ್ಲಿ ತಲೆಗೆ ಪೆಟ್ಟು ಬಿದ್ದಿದ್ದ ಆಟೋ ಚಾಲಕ ಮೂಡಗೂರು ನಿಂಗನಾಯಕ ಹಾಗೂ ಇಬ್ಬರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದರು. ಘಟನೆ ನಡೆದ ಕೂಡಲೇ ಖಾಸಗಿ ಬಸ್ ಚಾಲಕ ಮುರುಗ ಪರಾರಿಯಾಗಿದ್ದಾನೆ. ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net