

ಮುಂಡಗೋಡ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮುಂಡಗೋಡ-ಯಲ್ಲಾಪುರ ರಾಜ್ಯ ಹೆದ್ದಾರಿಯ ತಟ್ಟಿಹಳ್ಳಿ ಸನಿಹ ಬುಧವಾರ ರಾತ್ರಿ ನಡೆದಿದೆ.
ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮದ ಗುರುನಾಥ ಪವಾರ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪಟ್ಟಣದ ಸುಭಾಸನಗರದ ಆಶೀಪ್ ಗುಲಾಬ್ ಖಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.