ಬಳ್ಳಾರಿ : ತಾಲೂಕಿನ ಕೋಡಾಲ್ ಡಿಆರ್‌ಡಿಒ ವ್ಯಾಪ್ತಿಯಲ್ಲಿ ಹೋಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಔತಣ ಕೂಟದಲ್ಲಿ ಎರಡು ಗುಂಪುಗಳ ಮಧ್ಯೆ ಪರಸ್ಪರ ಜಗಳವಾಗಿ ಒಬ್ಬ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದ ಶಂಕರ(45) ಮೃತ. ಡಿಆರ್‌ಡಿಒ ಆವರಣದಲ್ಲಿ ಹಮ್ಮಿಕೊಂಡಿದ್ದ ಔತಣಕೂಟದಲ್ಲಿ ಎರಡು ಗುಂಪುಗಳು ಪರಸ್ಪರ ಜಗಳ ಆಡಿದ್ದಾರೆ. ಶಂಕರ್ ಮೇಲೆ ಕಬ್ಬಿಣದ ರಾಡ್ ಕಟ್ಟಿಗೆಗಳಿಂದ ಹಲ್ಲೆ ಮಾಡಲಾಗಿದೆ. ಚಿಕಿತ್ಸೆಗಾಗಿ ತೋರಣಗಲ್ ಸಂಜೀವಿನಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದಂತೆ ದಿನೇಶ್, ಸಂಪತ್, ಬಾಲೇಶ್ವರ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಬಾಲೇಶ್ವರ ನೀಡಿದ ದೂರಿನ್ವಯ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
====