ಸರ್ಕಾರಿ ಶಾಲೆಗೆ ಒಂದು ಲಕ್ಷ ರೂ. ಹಸ್ತಾಂತರ

Bel_Excel-College
Published on

ಬೆಳ್ತಂಗಡಿ: ವಿಜ್ಞಾನ ಮತ್ತು ವಾಣಿಜ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಹೊಸ ದಾಖಲೆ ಬರೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ, ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯಾದ, ಗುರುವಾಯನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಖರೀದಿಗೆ ಒಂದು ಲಕ್ಷ ರೂ. ಚೆಕ್‌ನ್ನು ಸ್ವಾತಂತ್ರ್ಯ ಸಂಭ್ರಮ ಸಂದರ್ಭ ಹಸ್ತಾಂತರಿಸಲಾಯಿತು.

ಗುರುವಾಯನಕೆರೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಲತೀಫ್ ಚೆಕ್ ಸ್ವೀಕರಿಸಿದರು. ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಮಾತನಾಡಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಶಿಕ್ಷಣದ ಜತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಟೊಂಕ ಕಟ್ಟಿರುವುದು ರಾಜ್ಯದ ಖಾಸಗಿ ಸಂಸ್ಥೆಗಳಿಗೆ ಮಾದರಿ ಎಂದರು.

ರಾಮಚಂದ್ರ ಮಿಜಾರ್ ಮಾತನಾಡಿ, ಸಮಾಜಮುಖಿ ಕಾರ್ಯಗಳ ಮೂಲಕ ಎಕ್ಸೆಲ್ ವಿದ್ಯಾಸಂಸ್ಥೆಗಳು ಜನರ ಹೃದಯ ಗೆಲ್ಲುತ್ತವೆ ಎಂದರು. ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಅರಮಲೆ ಬೆಟ್ಟ ಕ್ಯಾಂಪಸ್‌ನ ಇನ್ ಚಾರ್ಚ್ ಪ್ರಿನ್ಸಿಪಾಲ್ ಡಾ.ಪ್ರಜ್ವಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net