ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಬಂಧನ

crime
Published on

ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್ ಶಾಲೆ ಬಳಿ ಭಾನುವಾರ ಸಂಜೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ, 2,500 ರೂ. ವಶಪಡಿಸಿಕೊಂಡಿದ್ದಾರೆ.
ಶ್ರೀೀಲಂಕಾ ಕೋಲಂಬೋದ ಪ್ರೇಮದಾಸ್ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ಏಷಿಯಾ ಕಪ್ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎದುರಾಳಿಗಳಾಗಿದ್ದವು. ಈ ಪಂದ್ಯದ ವೇಳೆ ಬೆಟ್ಟಿಂಗ್ ಆಡುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net