

ವಿಜಯಪುರ: ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ ನಡೆದಿದೆ.
ಜಗದೀಶ್ ಹಣಮಂತ ಸತ್ತಿಗೇರಿ (40) ಸಿಡಿಲಿಗೆ ಬಲಿಯಾದ ದುರ್ದೈವಿ.ಸೋಮವಾರ ಮಧ್ಯಾಹ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಕೂಡಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.