

ಬೆಂಗಳೂರು: ವರ್ಷಾಂತ್ಯದಲ್ಲಿ ಮಹಾಮಾರಿ ಕೋವಿಡ್ ಮತ್ತೊಮ್ಮೆ ತನ್ನ ಆರ್ಭಟ ಶುರು ಮಾಡಿದ್ದು, ಇದರ ರೂಪಾಂತರ ತಳಿ JN.1 ವೈರಸ್ಗೆ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಮೃತರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದವರು ಎಂದು ತಿಳಿದು ಬಂದಿದೆ.
ಉಸಿರಾಟದ ಸಮಸ್ಯೆಯಿಮದ ಬಳಲುತ್ತಿದ್ದ ವ್ಯಕ್ತಿಗೆ ಕೋವಿಡ್ ಉಪತಳಿ JN.1 ವೈರಸ್ ತಗುಲಿತ್ತು. ಆದರೆ, ಆ ವ್ಯಕ್ತಿ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಸ್ಯಾಂಪಲ್ಗಳನ್ನು ಜೆನಾಮಿಕ್‌ಗೆ ಕಳುಹಿಸಲಾಗಿದ್ದು, ಐವರ ಪೈಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಯಾರು ಹೆದರುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.