ಕಾರು-ಬೈಕ್ ಭೀಕರ ಅಪಘಾತ; ಬೈಕ್​ ಸವಾರ ಸ್ಥಳದಲ್ಲೇ ಸಾವು

Car accident
Published on

ತುಮಕೂರು: ಕಾರು-ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹೊರವಲಯದ ಶ್ಯಾವಿಗೆಹಳ್ಳಿ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಶಿವಪ್ಪನಗುಡಿ‌ಯ ನಿವಾಸಿ ಮೈಲಾರಿ (43) ಸ್ಥಳದಲ್ಲೇ ಸಾವಿಗೀಡಾದ ವ್ಯಕ್ತಿ.

ಬೈಕ್ ಚಲಾಯಿಸುತ್ತಿದ್ದ ಮೈಲಾರಿ ಬೈಕ್​-ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾದರೆ, ಹಿಂಬದಿ ಕುಳಿತಿದ್ದ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net