

ಮೈಸೂರು: ಕಾವೇರಿ ಸಮೂಹ ವಿದ್ಯಾಸಂಸ್ಥೆಗಳು, ಡಾ. ಚಂದ್ರಶೇಖರ್ ಫೌಂಡೇಷನ್‌ನಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ತಹಶೀಲ್ದಾರ್ ಅದ ಡಾ.ವಿ.ರಂಗನಾಥ್ ಮಾತನಾಡಿ, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಆದರ್ಶಗಳನ್ನು ಎಲ್ಲರೂ ಗೌರವಿಸಬೇಕು. ರಾಷ್ಟ್ರ ನಿರ್ಮಾಣಕ್ಕೆ ಸಕ್ರಿಯದ ಕೊಡುಗೆ ನೀಡಬೇಕು ಎಂದರು. ತ್ರಿವರ್ಣ ಧ್ವಜದ ಇತಿಹಾಸ ಮತ್ತು ವಿಕಾಸದ ಒಳನೋಟಗಳ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾವೇರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಜಿ.ಆರ್. ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ದೇಶದ ಪ್ರಗತಿಯೊಂದಿಗೆ ಗುರುತಿಸಿಕೊಳ್ಳಬೇಕು ಎಂದರು. ವ್ಯವಸ್ಥಾಪಕ ನಿರ್ದೇಶಕಿ ಡಾ. ಸರಳಾ ಚಂದ್ರಶೇಖರ್, ಸಂಸ್ಥೆಯ ಡೀನ್ ಪ್ರೊ. ಎಸ್.ಶ್ರೀಕಂಠಸ್ವಾಮಿ, ಮುಖ್ಯ ಆಡಳಿತಾಧಿಕಾರಿ ಡಿ. ಅಶೋಕ್ ಇತರರು ಇದ್ದರು.