

ಕೋಟ: ಸ್ವಾವಲಂಬಿ ಬದುಕಿನತ್ತ ಪ್ರತಿಯೊಬ್ಬರು ಮುಂದಾಗಬೇಕು ಈ ಮೂಲಕ ತನ್ನ ಸ್ವಂತ ಕೌಶಲಾಭಿವೃದ್ಧಿ ಪ್ರಚುರಪಡಿಸಿಕೊಳ್ಳಿ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಕೋಟದ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯಲ್ಲಿ ಭಾರತ ಸರ್ಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಒಂದು ವಾರದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸ್ವ ಉದ್ಯಮದ ಮೂಲಕ ಯಶಸ್ಸು ಸಾಧಿಸಲು ಸಾಧ್ಯ. ಅದಕ್ಕೆ ಸರ್ಕಾರದ ಯೋಜನೆ ಅದಕ್ಕೆ ಸಂಬಂಧಿಸಿದ ತರಬೇತಿಗಳು ಸಹಕಾರಿಯಾಗಲಿದೆ. ಸರ್ಕಾರದ ಯೋಜನೆ ಪ್ರತಿಯೊಬ್ಬರು ಕರಾರುವಾಕ್ಕಾಗಿ ಅನುಷ್ಠಾನಗೊಳಿಸಬೇಕು ಎಂದರು.ಪರಿಸರ ಜಾಗೃತಿ ಪ್ರತಿಜ್ಞಾ ವಿಧಿ ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು. ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿ ಮುಖ್ಯಸ್ಥ ಚೇತನ್ ಬಂಗೇರ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.