ಭಾವಿ ಪತಿ ತನ್ನ ಕರೆ ಸ್ವೀಕರಿಸಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ!

death
ಸಾಂದರ್ಭಿಕ ಚಿತ್ರ
Published on

ಆನೇಕಲ್​: ತನ್ನನ್ನು ಮದುವೆಯಾಗಲಿರುವ ಹುಡುಗ ತನ್ನ ಕರೆಯನ್ನೇ ಸ್ವೀಕರಿಸಲಿಲ್ಲ ಎಂದು ಬೇಸರಗೊಂಡ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಇಗ್ಗಲೂರು ಬಳಿಯ ಆರ್.ಕೆ. ಫಾರ್ಮ್ ನಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ನಿವಾಸಿ ಸುಷ್ಮಾ (26) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ ಕೆಲವು ಸಮಯದ ಹಿಂದೆ ನಿಶ್ಚಿತಾರ್ಥವಾಗಿತ್ತು. ಆದರೆ ತನ್ನೊಂದಿಗೆ ಮದುವೆಯಾಗಲಿರುವ ಹುಡುಗ ತನ್ನ ಮೇಲೆ ಪ್ರೀತಿ ತೋರಿಸುತ್ತಿಲ್ಲ ಎಂದು ಈಕೆ ಖಿನ್ನತೆಗೆ ಒಳಗಾಗಿದ್ದಳು.

ಎರಡು ಮೂರು ದಿನಗಳಿಂದ ಡಿಪ್ರೆಸ್ಡ್ ಎಂದು ಸ್ಟೇಟಸ್ ಹಾಕಿದ್ದ ಸುಷ್ಮಾ, ಭಾವಿ ಪತಿ ತನ್ನ ಕರೆ ಸ್ವೀಕರಿಸುತ್ತಿಲ್ಲ ಎಂದು ಬೇಸತ್ತು ಇಂದು ಮನೆಯಲ್ಲಿ ನೇಣು ಹಾಕಿಕೊಂಡಿದ್ದಾಳೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net