ಪಕ್ಕದ್ಮನೆ ಮಗುವನ್ನು ಕೊಲೆ ಮಾಡಿದ್ದವ ತನ್ನ ತಾನೇ ಕೊಂದುಕೊಂಡ; ಜೈಲಲ್ಲೇ ಆತ್ಮಹತ್ಯೆ..

Jail
Published on

ಬೆಳಗಾವಿ: ಪಕ್ಕದ ಮನೆಯ ಮಗುವನ್ನು ಕೊಲೆ ಮಾಡಿ ಜೈಲುಪಾಲಾಗಿದ್ದವ ಅಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಹಿಪ್ಪಲಕರ್ (34) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಈ ಪ್ರಕರಣ ನಡೆದಿದೆ. ನಾಲ್ಕು ದಿನಗಳ ಹಿಂದೆ ಈತ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಬಳಿಕ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.

ಪಕ್ಕದ ಮನೆಯ ಮಗುವನ್ನ ಕೊಲೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಈತ ಆರು ವರ್ಷಗಳಿಂದ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಈ ಸಾವಿಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net