

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ.
ವಿಜಯನಗರ 2ನೇ ಹಂತದ ಮಹದೇಶ್ವರ ಬಡಾವಣೆ ವಾಟರ್ ಟ್ಯಾಂಕ್ ಬಳಿ ಇರುವ ಕರಣ್ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮೈಸೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿದ್ದು, ಹಣದ ಆಮಿಷವೊಡ್ಡಿ ಸ್ಥಳೀಯ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆಯಲ್ಲಿ ತೊಡಗಿಸಿ ಹಣ ಸಂಪಾದನೆ ಮಾಡುತ್ತಿದ್ದರು.
ಸ್ಥಳದಲ್ಲೇ ವ್ಯಕ್ತಿಯೊಬ್ಬನನ್ನು ಬಂಧಿಸಿ, ಇಬ್ಬರು ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.