ಈರುಳ್ಳಿ ಹಾನಿ, ಪರಿಹಾರಕ್ಕೆ ಮನವಿ

HN 12-5
Published on

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಈರುಳ್ಳಿ ಹಾನಿಯಾಗಿದ್ದು, ಪರಿಹಾರ ನೀಡುವಂತೆ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಬಸವನ ಬಾಗೇವಾಡಿ ತಾಲೂಕಿನ ಕರಿಭಂಟನಾಳ ಗ್ರಾಮದಲ್ಲಿ ರೈತರಾದ ಭೀಮನಗೌಡ ಪಾಟೀಲ, ಚಂದ್ರಶೇಖರ ನಾಟೀಕಾರ ಸೇರಿದಂತೆ ಅನೇಕ ರೈತರು ಬೆಳೆದ ಈರುಳ್ಳಿ ಕೊಳೆತು ಹಾಳಾಗಿದೆ. ಅತಿಯಾದ ಮಳೆಯಿಂದಾಗಿ ಈರುಳ್ಳಿ ಬೆಳೆದ ರೈತರು ನಷ್ಟವನ್ನು ಅನುಭವಿಸುವಂತಾಗಿದೆ. ಈಗಾಗಲೇ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಮಾರುಕಟ್ಟೆಯಲ್ಲಿಯೂ ಸೂಕ್ತ ಬೆಲೆ ಇಲ್ಲದೆ ಕಂಗಲಾಗಿರುವ ರೈತರಿಗೆ ಬರೆ ಎಳೆದಂತಾಗಿದೆ. ಈಗಾಗಲೇ ಲಾಕ್‌ಡೌನ್‌ನಿಂದ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಾಟ ಮಾಡಲಾಗದೇ ಸಂಕಷ್ಟ ಅನುಭಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ರೈತರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಬಸವನ ಬಾಗೇವಾಡಿ ತಾಲೂಕು ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ. ಚಂದ್ರಾಮ ತೆಗ್ಗಿ, ಭೀಮನಗೌಡ ಪಾಟೀಲ, ಚಂದ್ರಶೇಖರ ನಾಟೀಕಾರ, ಜಯಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಮುಖಂಡರಾದ ರಾಜಶೇಖರ ಕೋಟ್ಯಾಳ, ಮಹೇಶ ಯರನಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net