ಡಿಪ್ಲೊಮಾ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ

application
Published on

ಬಂಟ್ವಾಳ: ಪ್ರಥಮ ವರ್ಷ 2024-25ನೇ ಸಾಲಿನ ಡಿಪ್ಲೊಮಾ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಮೆರಿಟ್ ಆಧಾರಿತವಾಗಿ ಈ ಆಯ್ಕೆ ನಡೆಯಲಿದ್ದು, ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ತಾಂತ್ರಿಕ ಇಲಾಖೆಯ ವೆಬ್‌ಸೈಟ್ ಮೂಲಕ ಮಾಹಿತಿ ಪುಸ್ತಕ ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿರುವ ಸೂಚನೆಗಳನ್ವಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಮೇ 21 ಅಂತಿಮ ದಿನಾಂಕ. ಅರ್ಜಿ ಸಲ್ಲಿಸಲು ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್ ಸಿಬ್ಬಂದಿ ಸಹಾಯ ಪಡೆದುಕೊಳ್ಳಬಹುದು. ಈ ಬಗ್ಗೆ ಮಾಹಿತಿಗಾಗಿ ಕಚೇರಿ ಅಧೀಕ್ಷಕರ ಮೊಬೈಲ್ ಸಂಖ್ಯೆ 9449898414 ಅಥವಾ ದೂರವಾಣಿ ಸಂಖ್ಯೆ 0824-6816550ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net