

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗಾಗಿ ಹಾಸ್ಟೆಲ್ ಮ್ಯಾನೇಜ್ ಮೆಂಟ್ ಇನ್ಫಾರ್ಮೇಷನ್ ಸಿಸ್ಟಂ ನಲ್ಲಿ ಆನ್‌ಲೈನ್ ಮೂಲಕ ಜುಲೈ 15ರಿಂದ ಅರ್ಜಿ ಆಹ್ವಾನಿಸಿದೆ.
ಅಸಕ್ತರ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ವಿದ್ಯಾರ್ಥಿನಿಲಯಗಳಲ್ಲಿ ಸ್ಥಳಾವಕಾಶವನ್ನು ಖಚಿತಪಡಿಸಿಕೊಂಡು ಸಹಾಯಕ ನಿರ್ದೇಶಕರು, ಬೆಂಗಳೂರು ಉತ್ತರ ತಾಲ್ಲೂಕು ರವರ ಅನುಮೋದನೆ ಪಡೆದು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಇದಕ್ಕಾಗಿ ಕಡ್ಡಾಯವಾಗಿ ಎಚ್.ಎಂ.ಐ.ಎಸ್‌ನಲ್ಲಿ ನೋಂದಾಣಿ ಮಾಡಿಸಿಕೊಳ್ಳಬೇಕು.
ವಿವರಗಳಿಗೆ: ಸಹಾಯಕ ನಿರ್ದೇಶಕರು, ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಅಥವಾ ವೆಬ್ ಸೈಟ್ https://swdservices.karnataka.gov.in/swdhmis, ಅಥವಾ ದೂ: 080-28461351, 080-28461356 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಉತ್ತರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.