ಆನ್‌ಲೈನ್ ತರಗತಿ ಆಧಾರಿತ ಪರೀಕ್ಷೆಗೆ ವಿರೋಧ

online class
Published on

ಬೆಳಗಾವಿ: ಆನ್‌ಲೈನ್ ತರಗತಿ ಆಧರಿಸಿ ಪರೀಕ್ಷೆ ನಡೆಸಬಾರದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ಮತ್ತು ವಿಟಿಯು ವಿದ್ಯಾರ್ಥಿಗಳ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಆನ್‌ಲೈನ್‌ನಲ್ಲಿ(ಸಾಮಾಜಿಕ ಜಾಲತಾಣದಲ್ಲಿ) ಪ್ರತಿಭಟಿಸಿದರು.

ಅಖಿಲ ಕರ್ನಾಟಕ ಆಗ್ರಹ ದಿನದ ಅಂಗವಾಗಿ ಕರೆ ನೀಡಿದ್ದ ಹೋರಾಟಕ್ಕೆ ಸಾವಿರಾರ ವಿದ್ಯಾರ್ಥಿಗಳು ಸಾಥ್ ನೀಡಿದ್ದರು. ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳು ಸಹ ಹೋರಾಟದಲ್ಲಿ ಭಾಗವಹಿಸಿ ಆಗ್ರಹ ದಿನವನ್ನು ಯಶಸ್ವಿಗೊಳಿಸಿದರು. ಉಭಯ ಸರ್ಕಾರಗಳ ಒತ್ತಾಯದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿ ಪರಿಚಯಿಸಿತು. ಈ ಹಿನ್ನೆಲೆಯಲ್ಲಿ ಬಹುತೇಕ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿ ನಡೆಸಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಈ ತರಗತಿಗಳು ಅರ್ಥವಾಗುತ್ತಿಲ್ಲ, ನೆಟ್‌ವರ್ಕ್ ಸಮಸ್ಯೆಯಿಂದ ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯದ ಕ್ರಮವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ವಿಟಿಯು ಕುಲಪತಿಗಳನ್ನು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net