ಆನ್‌ಲೈನ್ ಜೂಜು ನಡೆಸುತ್ತಿದ್ದವನ ಬಂಧನ

Green,Lottery,Tickets,And,Indian,Rupees,Money,Bills,On,Blank
Published on

ವಿರಾಜಪೇಟೆ: ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ, ಆನ್‌ಲೈನ್ ಮೂಲಕ ಜೂಜು ನಡೆಸುತ್ತಿದ್ದ ಒಬ್ಬ ಆರೋಪಿಯನ್ನು ವಿರಾಜಪೇಟೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವಿರಾಜಪೇಟೆಯ ಗಾಂಧಿನಗರದ ನಿವಾಸಿ ಕೆ.ಎಂ.ರಶೀದ್ (47) ಬಂಧಿತ ಆರೋಪಿ.

ನಗರದ ಅಜ್ಞಾತ ಸ್ಥಳದಲ್ಲಿ ಕೆಲವು ಮಂದಿಗೆ ಅಕ್ರಮವಾಗಿ ಕೇರಳದ ಲಾಟರಿ ಫಲಿತಾಂಶದ ಒಂಟಿ ಸಂಖ್ಯೆಯ ಜೂಜು ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ವಿರಾಜಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ರಶೀದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಒಳಸಿದ್ದ ಮೊಬೈಲ್ ಫೋನ್ ಹಾಗೂ 6150 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಲಾಟರಿ ನಿಷೇಧ ಕಾಯ್ದೆಯ ಅನ್ವಯ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಿರಾಜಪೇಟೆ ಉಪ ವಿಭಾಗ ಡಿವೈಎಸ್‌ಪಿ ಆದೇಶದ ಮೇರೆಗೆ ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ನಗರ ಠಾಣೆಯ ಪಿಎಸ್‌ಐ ಪ್ರಮೋದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net