

ಮೈಸೂರು: ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಮುಂಚೂಣಿಯಲ್ಲಿರುವ ಅಕಾಶ್ ಎಜುಕೇಷನಲ್ ಸರ್ವಿಸ್ ಲಿಮಿಟೆಡ್ ಸಂಸ್ಥೆಯು ಸಂಸ್ಥೆಯಲ್ಲಿ 2024ರ ಪ್ರವೇಶಾತಿಗೆ ಶೈಕ್ಷಣಿಕ ವಿದ್ಯಾರ್ಥಿ ವೇತನ ನೀಡುತ್ತಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.
ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಫೌಂಡೇಷನ್ ಕೋರ್ಸ್‌ಗಳಿಗೆ ಶೇ.90 ರಷ್ಟು ವಿದ್ಯಾರ್ಥಿ ವೇತನ ನೀಡಲಾಗುವುದು. ಹುತಾತ್ಮರ ಮಕ್ಕಳಿಗೆ ಶೇ.100 ರಷ್ಟು ಬೋಧನಾ ಶುಲ್ಕ ವಿನಾಯಿತಿ ನೀಡಲಾಗುವುದು. ರಕ್ಷಣಾ ಸಿಬ್ಬಂದಿ, ಭದ್ರತಾ ಏಜೆನ್ಸಿಗಳು ಮತ್ತು ಭಯೋತ್ಪಾದನೆ ಬಾಧಿತ ವ್ಯಕ್ತಿಗಳ ಮಕ್ಕಳಿಗೆ ಶೇ.10ಕ್ಕಿಂತ ಹೆಚ್ಚು ವಿದ್ಯಾರ್ಥಿ ವೇತನ ನೀಡಲಾಗುವುದು. 2014ರಿಂದ ಇಲ್ಲಿಯವರೆಗೆ 75 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಸೌಲಭ್ಯ ಪಡೆದಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿ ವೇತನದ ಜತೆಗೆ ನಮ್ಮ ಸಂಸ್ಥೆಯಲ್ಲಿ ದಾಖಲಾತಿ ಪಡೆಯುವ ‘ದಿ ಇನ್‌ಸ್ಟಂಡ್ ಅಡ್ಮಿಷನ್ ಕಮ್ ಸ್ಕಾಲರ್‌ಶಿಪ್ ಟೆಸ್ಟ್’ ವಿದ್ಯಾರ್ಥಿಗಳಿಗೆ ತಕ್ಷಣ ದಾಖಲಾತಿ ಹಾಗೂ ವಿದ್ಯಾರ್ಥಿ ವೇತನವನ್ನು ನೀಡಲಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 30ರ ಅವಧಿಯೊಳಗೆ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಪರೀಕ್ಷೆಯನ್ನು ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ) ಫ್ಲಾಟ್‌ಫಾರ್ಮ್ ಮೂಲಕ ನಡೆಸಲಾಗುವುದು. ಜತೆಗೆ ಆಕಾಶ್ ವೆಬ್‌ಸೈಟ್ ಹಾಗೂ ಮೊಬೈಲ್ ಅಪ್ಲಿಕೇಷನ್‌ಗಳ ಮೂಲಕವೂ ನಡೆಸಲಾಗುವುದು ಎಂದು ಹೇಳಿದರು.
8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ತಮ್ಮ ವೃತ್ತಿಜೀವನದ ಸಾಮರ್ಥ್ಯ ಪ್ರದರ್ಶಿಸಲು ವೇದಿಕೆಯಾಗಿ ಆಕಾಶ್ ಕಾರ್ಯನಿರ್ವಹಿಸುತ್ತಿದೆ. ಆಕಾಶ್ ಮೂಲಕ ನೀಡಲಾಗುವ ವಿದ್ಯಾರ್ಥಿ ವೇತನಗಳು ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಫೌಂಡೇಷನ್ ತರಗತಿಯ ಕೋರ್ಸ್‌ಗಳ ಪ್ರವೇಶಕ್ಕೆ ಅನ್ವಯಿಸುತ್ತದೆ. ನಮ್ಮ ಸಂಸ್ಥೆಯು ಅರ್ಹ ವಿದ್ಯಾರ್ಥಿಗಳಿಗೆ ಗುರಿ ಸಾಧಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ. 2024ರ ಜೆಇಇ ಮೇನ್ಸ್‌ನಲ್ಲಿ ಆಕಾಶ್ ಅತ್ಯುತ್ತಮ ಯಶಸ್ಸು ಗಳಿಸಿದೆ. 41,263 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದು, 4,198 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 939 ವಿದ್ಯಾರ್ಥಿಗಳು ಶೇ.99ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 2023ರಲ್ಲಿ ನಡೆದ ನೀಟ್ ಯುಜಿ ಪರೀಕ್ಷೆಯಲ್ಲಿ ಆಕಾಶ್‌ನ 1,06,870 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಆಕಾಶ್ ಸಂಸ್ಥೆಯ ಅಧಿಕಾರಿಗಳಾದ ವಿಕ್ರಂ, ಸುಹಾಸ್, ವಿಶಾಲ್, ದೀಪಕ್ ಇದ್ದರು.