ಸಾಧಕರನ್ನು ಮಾತ್ರ ಪ್ರಶಸ್ತಿಗೆ ಆಯ್ಕೆ ಮಾಡಬೇಕು : ಸಾಹಿತಿ ಬನ್ನೂರು ಕೆ. ರಾಜು

bannur raju
Published on

ಮೈಸೂರು: ಯಾವುದೇ ಕ್ಷೇತ್ರಕ್ಕೆ ಪ್ರಶಸ್ತಿ, ಪುರಸ್ಕಾರಕ್ಕೆ ಅಯ್ಕೆ ಮಾಡುವಾಗ ಸಾಧನೆಯನ್ನು ಮಾತ್ರ ಮಾನದಂಡವಾಗಿ ಪರಿಗಣಿಸಬೇಕು ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು.

ನಗರದ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಶನಿವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗು ಜಾದು ಕಲಾವಿದೆ ಸುಮಾ ರಾಜ್‌ಕುಮಾರ್ ಅವರಿಗೆ ‘ಕನ್ನಡಾಂಬೆ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಅದು ಯಾರೇ ಆಗಿರಲಿ, ಯಾವುದೇ ರಂಗವಿರಲಿ, ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸಬೇಕು. ಕನ್ನಡಾಂಬೆ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಜಾದು ಕಲಾವಿದೆ ಸುಮಾ ರಾಜಕುಮಾರ್ ಅಕ್ಷರಶಃ ನಿಜ ಸಾಧಕಿಯಾಗಿದ್ದಾರೆ ಎಂದರು.

ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್, ಸಾಹಿತಿ ಡಾ.ಕೆ ಲೀಲಾಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು, ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಅಧ್ಯಕ್ಷೆ ಸುಶೀಲಮ್ಮ, ವೇದಿಕೆ ಕಾರ್ಯಾಧ್ಯಕ್ಷೆ ರೂಪಾ, ಉಪಪ್ರಾಂಶುಪಾಲೆ ಪ್ರಭಾ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net