ಆಟೋ ಚಾಲಕರಿಗೆ ಪ್ರತ್ಯೇಕ ಕೇಂದ್ರ ತೆರೆಯಿರಿ

ಆಟೋ ಚಾಲಕರಿಗೆ ಪ್ರತ್ಯೇಕ ಕೇಂದ್ರ ತೆರೆಯಿರಿ
Published on

ಹಾಸನ: ಜಿಲ್ಲೆಯಲ್ಲಿರುವ ಆಟೋ ಚಾಲಕರಿಗೆ ಚಾಲನ ಪರವಾನಗಿ, ನವೀಕರಣ, ಫಿಟ್‌ನೆಸ್ ಸರ್ಟಿಫಿಕೇಟ್, ಪರ್ಮಿಟ್, ಆಟೋ ವರ್ಗಾವಣೆ ಸೌಲಭ್ಯಗಳಿಗಾಗಿ ಪ್ರತ್ಯೇಕ ಸೇವಾ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಆಟೋ ಚಾಲಕರ ಕುಂದುಕೊರತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಟೋ ನಿಲ್ದಾಣಕ್ಕೆ ನಿಗದಿತ ಸ್ಥಳಗಳನ್ನು ಗುರುತಿಸುವಂತೆ ಸೂಚಿಸಿದರು.

ಆಟೋ ಚಾಲಕರಿಗೆ ಎಬಿಆರ್‌ಕೆ ಕಾರ್ಡ್, ಇ-ಶ್ರಮ ಕಾರ್ಡ್, ಪಿಎಂ ಜೆಜೆಎಂ, ಎಪಿವೈ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಟೋ ಚಾಲಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಬೇಕು. ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದ ಅವರು ಅವರ ಕುಟುಂಬದ ಭವಿಷ್ಯ ಉತ್ತಮವಾಗಬೇಕು ಎಂದರು.

ನಗರವ್ಯಾಪ್ತಿಯಲ್ಲಿ ವಾಹನಗಳನ್ನು ಕ್ರಮಬದ್ಧವಾಗಿ ನಿಲುಗಡೆ ಮಾಡದೆ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಾರೆ. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಶಿಸ್ತು ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ತಮ್ಮಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಗಿರೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net