ಎಸ್‌ಜೆಸಿಯಲ್ಲಿ ಮೇ 31 ರಂದು ಮುಕ್ತ ದಿನ

sjce
Published on

ಮೈಸೂರು: ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಮತ್ತು ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಕಾಲೇಜಿನಲ್ಲಿ ಮೇ 31 ರಂದು ಮುಕ್ತ ದಿನ, ಜೂ.1, 2 ರಂದು ಸಾಂಸ್ಕೃತಿಕ ಕಾರ್ಯಕ್ರಮ ‘ಜೇಸಿಯಾನ-2025’ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ನಟರಾಜ್ ತಿಳಿಸಿದರು.

ಮೇ 31 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಮುಕ್ತ ದಿನ ಆಯೋಜಿಸಲಾಗಿದ್ದು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ ಮುಕ್ತ ದಿನವನ್ನು ಉದ್ಘಾಟಿಸುವರು. ಮುಕ್ತ ದಿನವು ವಿದ್ಯಾರ್ಥಿಗಳಿಗೆ, ಪಾಲಕರಿಗೆ ಹಾಗೂ ಜನಸಾಮಾನ್ಯರಿಗೆ ಕಾಲೇಜಿನ ಆವರಣಕ್ಕೆ ಭೇಟಿ ನೀಡಿ ಕಾಲೇಜಿನ ಅತ್ಯಾಧುನಿಕ ಮೂಲಸೌಕರ್ಯಗಳು, ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳ ಚಟುವಟಿಕೆಗಳನ್ನು ವೀಕ್ಷಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೂ 1 ರ ಸಂಜೆ 6ಕ್ಕೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಪ್ರದರ್ಶನ ನೀಡಲಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಜೂ.2 ರ ಸಂಜೆ 6ಕ್ಕೆ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಪ್ರದರ್ಶನ ನೀಡಲಿದ್ದಾರೆ. ಗಾಯಕ ಜೋಡಿಯಾದ ಸುಕೃತಿ ಕಕ್ಕರ್ ಮತ್ತು ಪ್ರಕೃತಿ ಕಕ್ಕರ್ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿವಿಯ ಕುಲಸಚಿವ ಡಾ.ಹರೀರ್ಶ, ಡೀನ್‌ಗಳಾದ ಡಾ. ನಾಗೇಂದ್ರಪ್ರಸಾದ್, ಡಾ. ಅನಿಲ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net