ಏಪ್ರಿಲ್ 28 ರಂದು ಓಪನ್ ಡೇ ಕಾರ್ಯಕ್ರಮ

book
Published on

ಮೈಸೂರು: ಗೋಕುಲಂ ಮೂರನೇ ಹಂತದಲ್ಲಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏಪ್ರಿಲ್ 28 ರಂದು ಬೆಳಗ್ಗೆ 10.30ಕ್ಕೆ ಪಿಯುಸಿ ವಿದ್ಯಾರ್ಥಿಗಳಿಗಾಗಿ ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಬಿ. ಸದಾಶಿವೇಗೌಡ ತಿಳಿಸಿದರು.

ಪಿಯುಸಿ ನಂತರ ಯಾವ ವಿಭಾಗದಲ್ಲಿ ವಿದ್ಯಾಭ್ಯಾಸ ಮುಂದುವರಿಸಬೇಕು, ಯಾವ ವಿಭಾಗಕ್ಕೆ ಹೆಚ್ಚಿನ ಆದ್ಯತೆ ಇದೆ ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಣ್ಣಪುಟ್ಟ ಕಾರಣಗಳಿಂದಾಗಿ ತಾವು ಬಯಸಿದ ಕಾಲೇಜಿನಲ್ಲಿ ತಾವು ಬಯಸಿದ ಕೋರ್ಸ್ ಸಿಗದೇ ಹಲವು ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಇನ್ಫೋಸಿಸ್, ಇಂಟೆಲ್ ಮೊದಲಾದ ಕಂಪನಿಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಆಗಮಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಾ.ಮಧುಸೂದನ್, ಡಾ.ಅರುಣ್ ದೀಕ್ಷಿತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net