ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ

New Project (5)
Published on

ಕಡಬ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ14ರ ವಯೋಮಾನದ ಬಾಲಕರ, 17ರ ವಯೋಮಾನದ ಬಾಲಕ-ಬಾಲಕಿಯರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಸುಳ್ಯ ತಾಲೂಕು ಗುತ್ತಿಗಾರು ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ ಬಾಲಕ-ಬಾಲಕಿಯರ ಮುಕ್ತ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 14ನೇ ವಯೋಮಾನ ಬಾಲಕರ, 17ನೇ ವಯೋಮಾನದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಸಮರ್ಥ್ ಬಾಹುಬಲಿ ಯಲ್ಲಟ್ಟಿ, ಬೆಸ್ಟ್ ಕ್ಯಾಚರ್ ಲತೇಶ್, 17ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಅಭಿಷೇಕ್ ಹೊಸಮನಿ ಬೆಸ್ಟ್ ಆಲ್ ರೌಂಡರ್, ಬೆಸ್ಟ್ ರೈಡರ್ ಚಿಂತನ್, ಬಾಲಕಿಯರ ವಿಭಾಗದಲ್ಲಿ ಧನ್ವಿ ಎಂ. ಬೆಸ್ಟ್ ಆಲ್ ರೌಂಡರ್, ರಮ್ಯಾ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡರು.

ಮುಖ್ಯಶಿಕ್ಷಕ ಸತೀಶ್ ಭಟ್ ಮಾರ್ಗದರ್ಶನದಲ್ಲಿ ಮಾಧವ ಬಿ.ಕೆ., ಜಸ್ವಂತ್, ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net