ಛಾಯಾಚಿತ್ರ ಪ್ರದರ್ಶನ ಮತ್ತು ವಿಚಾರ ಸಂಕಿರಣಕ್ಕೆ ತೆರೆ

chayachitra pradarshana photos
Published on

ಮೈಸೂರು: ಕೇಂದ್ರ ಸಂವಹನ ಇಲಾಖೆ, ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಪಾಲಿಕೆ ವತಿಯಿಂದ ಮಹಾರಾಜ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನ ಮತ್ತು ವಿಚಾರ ಸಂಕಿರಣದ ಸಮಾರೋಪ ಸಮಾರಂಭ ಮಂಗಳವಾರ ನರವೇರಿತು.


ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ನಾಗೇಶ್ ಬೆಟ್ಟಕೋಟೆ, ಕೇಂದ್ರ ಸಂವಹನ ಇಲಾಖೆ ನಿರ್ದೇಶಕಿ ಪಲ್ಲವಿ ಚಿಣ್ಯಾಮ, ಜಿಎಸ್‌ಎಸ್ ಸಂಸ್ಥೆಯ ನಿರ್ದೇಶಕ ಶ್ರೀಹರಿ, ಲಲಿತಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ್, ಭಾರತ ಸೇವಾದಳದ ರಾಜ್ಯ ಸಂಪನ್ಮೂಲ ವ್ಯಕ್ತಿ ಶೇಷಾಚಲ, ಜೆಎಸ್‌ಎಸ್ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕ ರಮೇಶ್ ಇದ್ದರು.

ಕೇಂದ್ರ ಸಂವಹನ ಇಲಾಖೆ ಉಪನಿರ್ದೇಶಕಿ ಡಾ.ಟಿ.ಸಿ. ಪೂರ್ಣಿಮಾ ಸಮಾರೋಪ ಭಾಷಣ ಮಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಅತಿಥಿಗಳಿಗೆ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net