ಕಾಂಗ್ರೆಸ್ ಸೇರುವ ವದಂತಿಗೆ ತೆರೆ

Published on

ಚಿತ್ರದುರ್ಗ: ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂ ರಪ್ಪ ತೆರೆ ಎಳೆದಿದ್ದಾರೆ.

ಹಿರಿಯೂರಿನಲ್ಲಿ ಸೋಮವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿ,ಪೂರ್ಣಿಮಾ ಅವರು ನಮ್ಮ ಜತೆ ಇದ್ದಾರೆ.

ಈ ವೇಳೆ ಪೂರ್ಣಿಮಾ ಅವರು ಟಿವಿಯವರಿಗೆ ಬುದ್ದಿ ಇಲ್ಲ. ಪದೆ,ಪದೇ ನನ್ನ ಹೆಸರು ತೋರಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಪ್ರತಿಕ್ರಿಯಿಸಿದ ಬಿಎಸ್‌ವೈ ಹಾಗಾದರೂ ಪ್ರಚಾರ ಸಿಗುತ್ತಿದ್ದೆಯಲ್ಲ ಎಂದು ನಕ್ಕರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಿರಿಯೂರಿಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ವಾಗತಿಸಿದ ಪೂರ್ಣಿಮಾ ಯಡಿಯೂರಪ್ಪ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಬೆಂಬಲ ಸಿಗುತ್ತಿದೆ. ಉತ್ತಮ ವಾತಾವರಣ ನಿರ್ಮಾಣವಾಗಿದೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಕೆಲವರು ನಾವೇ ಮುಂದಿನ ಮುಖ್ಯಮಂತ್ರಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಇದಕ್ಕೆ ಯಾವುದೇ ಅರ್ಥ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net