ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ

throw ball
Published on

ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಕ್ಕೆ ಬುಧವಾರ ತೆರೆ ಬಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ವಿಶ್ವ ವಿದ್ಯಾಲಯದ ಸ್ಪೋರ್ಟ್ಸ್ ಪೆವಿಲಿಯನ್, ಜೆಪಿ ನಗರದ ಮಹರ್ಷಿ ಶಾಲೆ, ಕುವೆಂಪುನಗರದ ಕನ್ನೇಗೌಡ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಜರುಗಿದವು.


ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಅಥ್ಲೆಟಿಕ್ಸ್, ಟೆನಿಕಾಯ್ಟ, ವೇಯ್ಟಲಿಫ್ಟಿಂಗ್, ಪವರ್‌ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಚೆಸ್, ಥ್ರೋಬಾಲ್, ಈಜು, ಕೇರಂ, ಬಾಲ್ ಬ್ಯಾಡ್ಮಿಂಟನ್, ಟೆನಿಸ್, ಫುಟ್ಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಹಾಗೂ ಕ್ರಿಕೆಟ್ ಕ್ರೀಡೆಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net