

ರಾಮನಗರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತ ಮುಂದುವರಿದಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸೇರಿ ಜೆಡಿಎಸ್ ನ 9 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.
ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಎಂಎಲ್ ಸಿ ಪುಟ್ಟಣ್ಣ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಪ್ರಶಾಂತ್ ಸೇರಿ 9 ಮಂದಿ ಜೆಡಿಎಸ್ ಸದಸ್ಯರು ಹಾಗು ಓರ್ವ ಪಕ್ಷೇತರ ಸದಸ್ಯೆ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.
ಸಯದ್ ರಫೀಕ್ ಅಹಮದ್, ಅಭಿದಾ ಬಾನು, ನಾಗೇಶ್, ರೇವಣ್ಣ, ಸತೀಶ್ ಬಾಬು, ಲೋಕೇಶ್ , ಭಾನುಪ್ರಿಯ, ಪಕ್ಷೇತರ ಸದಸ್ಯೆ ಉಮಾ ಆಪರೇಷನ್ ಹಸ್ತಕ್ಕೆ ಒಳಗಾದ ಪ್ರಮುಖರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಗಂಗಾಧರ್, ರಘುನಂದನ್ ರಾಮಣ್ಣ ಮುಂತಾದವರು ಇದ್ದರು.