ವೈರಿಗಳ ಸದೆಬಡಿದ ಅಪರೇಷನ್ ಸಿಂಧೂರ

Operation of the foes
ಬನಹಟ್ಟಿಯ ಪ್ರಮುಖ ಬೀದಿಗಳಲ್ಲಿ ತಿರಂಗಾ ಯಾತ್ರೆ ಜರುಗಿತು.
Published on

ರಬಕವಿ/ಬನಹಟ್ಟಿ: ನಮ್ಮ ಭಾರತೀಯ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದವರಿಗೆ ಅಪರೇಷನ್ ಸಿಂಧೂರ ಮೂಲಕ ವೈರಿಗಳನ್ನು ಸದೆಬಡಿಯಲಾಗಿದೆ. ಇದರಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ಥೈರ್ಯ ತುಂಬುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸೈನಿಕ ಹಿಪ್ಪರಗಿ ರಾಮನಗೌಡ ಪಾಟೀಲ ಹೇಳಿದರು.

ಬನಹಟ್ಟಿಯಲ್ಲಿ ಶುಕ್ರವಾರ ಸಂಜೆ ತಿರಂಗಾ ಯಾತ್ರೆಯ ನಂತರ ಈಶ್ವರಲಿಂಗ ಮೈದಾನದಲ್ಲಿ ಜರುಗಿದ ಬೃಹತ್ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಅಖಂಡತೆ ಮತ್ತು ಭದ್ರತೆಗೆ ಧಕ್ಕೆ ಉಂಟಾದಾಗ ನಮ್ಮ ದೇಶ ಕಾಪಾಡುವ ಹೊಣೆ ಸೈನಿಕರದ್ದಾಗಿದೆ. ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ವೀರಬಿಕ್ಷಾವರ್ತಿ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು ಮಾತನಾಡಿ, ಭವಿಷ್ಯದಲ್ಲಿ ಪಾಕಿಸ್ತಾನ ಯಾವುದೇ ದುಸ್ಸಾಹಸದಲ್ಲಿ ತೊಡಗಿದರೆ, ವಿಶ್ವಮಟ್ಟದಲ್ಲಿ ಪಾಪಿಪಾಕಿಸ್ತಾನ ದೊಡ್ಡ ಸಂಕಷ್ಟ ಎದುರಿಸಲಿದೆ ಎಂದರು.

ಮೈಗೂರಿನ ಗುರುಪ್ರಸಾದ ಸ್ವಾಮೀಜಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಅವರ ಬಲವಾದ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ಶ್ಲಾಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ‘ಭಾರತ್ ಮಾತಾ ಕಿ ಜೈ’ ಮತ್ತು ‘ಭಾರತೀಯ ಸೇನೆಗೆ ಜಯ’ ಮುಂತಾದ ಘೋಷಣೆಗಳ ಮೂಲಕ ತಿರಂಗಾ ಯಾತ್ರೆ ಜರುಗಿತು.

ಬನಹಟ್ಟಿ ಹಿರೇಮಠದ ಶ್ರೀ ಶರಣಬಸವ ಶಿವಾಚಾರ್ಯರು, ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಶ್ರೀ ಗುರುಸಿದ್ಧೇಶ್ವರ ಶ್ರೀಗಳು,ಬಂಡಿಗಣಿ ನೀಲಮಾಣಿಕಮಠದ ಶ್ರೀ ಅನ್ನದಾನೇಶ್ವರ ಶ್ರೀಗಳು, ಹಿಂದುಪರ ಸಂಘಟನೆಗಳ ಮುಖಂಡ ನಂದಕುಮಾರ್ ಗಾಯಕವಾಡ, ಶಾಸಕ ಸಿದ್ದು ಸವದಿ ಮಾತನಾಡಿದರು.

ಮಾಜಿ ಸೈನಿಕರು, ವಿದ್ಯಾರ್ಥಿಗಳು, ಎನ್‌ಸಿಸಿ ಕೇಡೆಟ್‌ಗಳು, ಯುವಕರು, ಚಿಂತಕರು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net