ಇಂದು, ನಾಳೆ ಕಾರ್ಯಾಚರಣೆ

Wild Elephant appeared in heggove sakleshpur 2 MAR 20
Published on

ಸಿದ್ದಾಪುರ: ವಿರಾಜಪೇಟೆ ಹಾಗೂ ಅಮ್ಮತ್ತಿ ವ್ಯಾಪ್ತಿಯ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಮಾ.15, 16ರಂದು ಹಮ್ಮಿಕೊಂಡಿರುವುದರಿಂದ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇರುವಂತೆ ವಿರಾಜಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹಲವು ದಿನಗಳಿಂದ ಗದ್ದೆ ಹಾಗೂ ತೋಟಗಳಿಗೆ ಲಗ್ಗೆ ಇಟ್ಟು ಫಸಲು ನಾಶ ಮಾಡುತ್ತಿದ್ದು, ಗ್ರಾಮಸ್ಥರ ಮನವಿಯ ಮೇರೆಗೆ ಕುತ್ತೂರು, ಬೆಳ್ಳರಿಮಾಡು, ಕದನೂರು, ಪುದುಕೋಟೆ, ಐಮಂಗಲ, ಮಗ್ಗುಲ, ಬಿಟ್ಟಂಗಾಲ, ದೇವಣಗೇರಿ, ಚಂಬೆಬೆಳ್ಳೂರು, ಕಾವಾಡಿ, ಕಣ್ಣಂಗಾಲ, ಮೈತಾಡಿ, ಚಾಮಿಯಾಲ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net