ಸುಪ್ತ ಪ್ರತಿಭೆ ಅನಾವರಣದಿಂದ ಬೆಳವಣಿಗೆ, ಶ್ರೀನಿವಾಸ ವಿವಿ ನಿರ್ದೇಶಕ ಎಂ.ಶಶಿಧರ ಕೋಟ್ಯಾನ್ ಅಭಿಪ್ರಾಯ

sourabha
ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಅಂತರ ತರಗತಿ ಸಾಂಸ್ಕೃತಿಕ ಸ್ಪರ್ಧೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗ ನಿರ್ದೇಶಕ ಎಂ.ಶಶಿಧರ ಕೋಟ್ಯಾನ್ ಉದ್ಘಾಟಿಸಿದರು. ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಸಂಸ್ಥೆಯ ಕಾರ್ಯದರ್ಶಿ ಪ್ರದೀಪ ಕುಮಾರ ಕಲ್ಕೂರ, ಟ್ರಸ್ಟಿ ಸುಧಾಕರ ರಾವ್ ಪೇಜಾವರ, ಶಿಕ್ಷಕ-ರಕ್ಷಕ ಸಂಘದ ಸದಸ್ಯ ಪ್ರಕಾಶ್ ಇಳಂತಿಲ, ಶಾರದಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಎಸ್ ಮೊದಲಾದವರು ಹಾಜರಿದ್ದರು.
Published on

ಮಂಗಳೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಜಗತ್ತಿಗೆ ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಇದರಿಂದ ಅವರ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆ ಸಾಧ್ಯ. ಶಿಕ್ಷಣದೊಂದಿಗೆ ಸಂಸ್ಕೃತಿ ಸಂಪನ್ನರಾದ ಯುವ ಜನಾಂಗ ರೂಪುಗೊಂಡಾಗ ನಮ್ಮ ರಾಷ್ಟ್ರ ವಿಶ್ವಮಾನ್ಯವಾಗಬಹುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯ ಸಂಶೋಧನಾ ವಿಭಾಗದ ನಿರ್ದೇಶಕ ಎಂ.ಶಶಿಧರ ಕೋಟ್ಯಾನ್ ಹೇಳಿದರು.

ನಗರದ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಅಂತರ ತರಗತಿ ಸಾಂಸ್ಕೃತಿಕ ಸ್ಪರ್ಧೆ ಸೌರಭ ಉದ್ಘಾಟಿಸಿ ಮಾತನಾಡಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಪ್ರದೀಪ ಕುಮಾರ ಕಲ್ಕೂರ, ಟ್ರಸ್ಟಿ ಸುಧಾಕರ ರಾವ್ ಪೇಜಾವರ, ಶಿಕ್ಷಕ-ರಕ್ಷಕ ಸಂಘದ ಸದಸ್ಯ ಪ್ರಕಾಶ್ ಇಳಂತಿಲ, ಶಾರದಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಎಸ್, ಉಪಪ್ರಾಂಶುಪಾಲ ಪ್ರಕಾಶ್ ನಾಯ್ಕ ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಂಘದ ಸಂಯೋಜಕಿ ಅನುಪಮ ಜಿ.ಕೆ ಸ್ವಾಗತಿಸಿದರು. ದಿಯಾ ಆರ್.ಬಂಗೇರ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ನಿಹಾರಿಕಾ ವಂದಿಸಿದರು. ತುಷಾರ್ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net