ಆಳ್ವಾಸ್‌ನಿಂದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ

Mbd_Alvas
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಒಂದು ಭಾಗವಷ್ಟೇ. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇಂತಹ ವಿಪುಲ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಆಳ್ವಾಸ್ ಕಲ್ಪಿಸುತ್ತಿರುವುದು ಶ್ಲಾನೀಯ. ಹಳೆ ವಿದ್ಯಾರ್ಥಿಗಳ ಪುನರ್ಮಿಲನದಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಸ್ಥೆ ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಭಾಂದವ್ಯ ಬೆಸೆಯುವ ವೇದಿಕೆ ಕಲ್ಪಿಸಿಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು.

ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ವಿವಿಧ ವಿದ್ಯಾರ್ಥಿ ಟಕಗಳ ವಾರ್ಷಿಕ ದಿನಾಚರಣೆ ‘ಇನಾಮು- 2025’ ಸವಾರೋಪ ಸವಾರಂಭದಲ್ಲಿ ಮಾತನಾಡಿದರು.

ನಟ ಅರವಿಂದ್ ಬೋಳಾರ್ ವಾತನಾಡಿ, ವಿದ್ಯೆಯೊಂದಿಗೆ ಪ್ರತಿಭೆಯನ್ನು ಒಗ್ಗೂಡಿಸಿ ಕಂಡ ಕನಸನ್ನು ನನಸಾಗಿಸುವ ಜವಾಬ್ದಾರಿ ಪ್ರತಿ ವಿದ್ಯಾರ್ಥಿಗಿರುತ್ತದೆ ಎಂದರು.

ಚಲನಚಿತ್ರ ನಟ, ನಿರ್ದೇಶಕ ಅನೀಶ್ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ, ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಇನಾಮು ಸಂಯೋಜಕರಾದ ಡಾ.ಯೋಗೀಶ್ ಕೈರೋಡಿ ಮತ್ತು ಮನು ಡಿ.ಎಲ್., ವಿವಿಧ ಫೋರಂ ವಿದ್ಯಾರ್ಥಿ ಸಂಯೋಜಕರು ಮತ್ತು ಪ್ರಾಧ್ಯಾಪಕು ಉಪಸ್ಥಿತರಿದ್ದರು. ಸೌರಭ್ ಶೆಟ್ಟಿ ವಂದಿಸಿದರು. ಅಮೂಲ್ಯಾ ಜೈನ್ ನಿರೂಪಿಸಿದರು.

ಬಹುಮಾನ ವಿತರಣೆ

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಗ್ರ ಪ್ರಶಸ್ತಿಯನ್ನು ಎನ್‌ಎಸ್‌ಎಸ್ ಫೋರಂ ಪಡೆದರೆ, ರನ್ನರ್ ಅಪ್ ಸ್ಥಾನವನ್ನು ತುಳು ಫೋರಂ, ಡ್ಯಾನ್ಸ್ ಫೋರಂ ತತೀಯ ಸ್ಥಾನ ಪಡೆಯಿತು. ಎನ್‌ಸಿಸಿ ನೌಕಾದಳ ಫೋರಂಗೆ ಉತ್ತಮ ಕಾರ್ಯಕ್ರಮ ಆಯೋಜಕ ಪ್ರಶಸ್ತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net