

ಮಂಡ್ಯ: ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ 2022-23, 2023-24 ಮತ್ತು 2024-25ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮೊ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ದೊರಕದಂತಹ ಅರ್ಹ ಅಭ್ಯರ್ಥಿಗಳು https://sevasindhugs.karnataka.gov.in ಸೇವಾಸಿಂಧು ವೆಬ್‌ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಹರು ಕರ್ನಾಟಕ ಒನ್/ ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಈ ವೇಳೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಸಂಖ್ಯೆ ಕೊಡಬೇಕು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್‌ನಲ್ಲಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಸಲ್ಲಿಸಿರುವ ಅರ್ಜಿಯು ಅನುಮೋದನೆ ಆಗದ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದು. ಮಾಹಿತಿಗೆ ದೂ.ಸಂ 08232-295124, ಮೊ.ಸಂ 9113875775 ಮತ್ತು 9164642684 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.