ವಿಶೇಷ ಕಾರ್ಯಪಡೆ ವ್ಯಾಪ್ತಿಗೆ ಉಡುಪಿ ಜಿಲ್ಲೆ ಸೇರ್ಪಡೆಗೆ ವಿರೋಧ

udp-yashpal suvarna mla
Published on

ಉಡುಪಿ: ಹೊಸದಾಗಿ ರಚಿಸಿರುವ ವಿಶೇಷ ಕಾರ್ಯ ಪಡೆಯ ವ್ಯಾಪ್ತಿಗೆ ಉಡುಪಿ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಮೂಲಕ ಕಾಂಗ್ರೆಸ್​ ಸರ್ಕಾರ ಉಡುಪಿ ಜಿಲ್ಲೆಯ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದು, ಜಿಲ್ಲೆಯನ್ನು ಕೋಮು ಸೂಕ್ಷ$್ಮ ಪ್ರದೇಶ ಎಂಬುದಾಗಿ ಬಿಂಬಿಸಲು ಅವಕಾಶ ನೀಡುವುದಿಲ್ಲ ಎಂದು ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯನ್ನು ಈ ಕಾರ್ಯಪಡೆಯ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕಳೆದ ಹಲವು ದಶಕಗಳಿಂದ ಯಾವುದೇ ಕೋಮು ಸಂಘರ್ಷದ ಘಟನೆಗಳು ಉಡುಪಿ ಜಿಲ್ಲೆಯಲ್ಲಿ ವರದಿಯಾಗಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆಯದೆ ಏಕಪಕ್ಷೀಯವಾಗಿ ಈ ಕಾರ್ಯಪಡೆಯನ್ನು ಉಡುಪಿ ಜಿಲ್ಲೆಯ ಜನತೆಯ ಮೇಲೆ ಹೇರಿದೆ. ಇದರಿಂದ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಮುಂದಾಗಿರುವ ಉದ್ಯಮಿಗಳು ಹಾಗೂ ಯುವ ಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲಿರುವ ಐಟಿ ಬಿಟಿ ಕಂಪೆನಿಗಳು ಉಡುಪಿ ಜಿಲ್ಲೆಯನ್ನು ಕಡೆಗಣಿಸುವ ಸನ್ನಿವೇಶ ನಿಮಾರ್ಣವಾಗಲಿದೆ ಎಂದು ಆರೋಪಿಸಿದ್ದಾರೆ.

ಉಡುಪಿ ನೆರೆಯ ಜಿಲ್ಲೆಗಳಲ್ಲಿ ಕೋಮು ಸಂಘರ್ಷದ ಘಟನೆಗಳು ನಡೆದಾಗಲು ಶಾಂತಿಯುತವಾಗಿದ್ದು, ಶಿಸ್ತು, ಸಂಯಮ, ಕಾನೂನು ಪಾಲನೆ ಹಾಗೂ ರಾಷ್ಟೀಯವಾದಿ ಚಿಂತನೆಯ ಮೂಲಕ ಕಾನೂನು ಸುವ್ಯವಸ್ಥೆಗೆ ಸದಾ ಸಹಕಾರ ನೀಡುತ್ತಿದೆ ಎಂದು ಹೇಳಿದ್ದಾರೆ.

ಕೋಮು ಸಂಘರ್ಷಕ್ಕೆ ಕಾರಣವಾಗಿರುವ ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ನಡೆಯುತ್ತಿರುವ ಗೋವುಗಳ ಕಳ್ಳತನವನ್ನು ತಡೆಯಲು ಗೋ ಹಂತಕರ ವಿರುದ್ಧ ಗೋವು ಕಳ್ಳತನ ನಿಗ್ರಹ ವಿಶೇಷ ಕಾರ್ಯಪಡೆಯನ್ನು ರಾಜ್ಯ ಸರ್ಕಾರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲೆಯ 5 ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಕಾಂಗ್ರೆಸ್​ ಪಕ್ಷ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಹತಾಶಗೊಂಡಿರುವ ರಾಜ್ಯ ಸರ್ಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡದೆ ನಿರಂತರವಾಗಿ ರ್ನಿಲಕ್ಷ$್ಯ ಮಾಡುತ್ತಿದ್ದು, ಮತೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಕೋಮು ಹಿಂಸೆ ನಿಗ್ರಹ ಪಡೆಯ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಲು ಕಾಂಗ್ರೆಸ್​ ಸರ್ಕಾರ ಮುಂದಾಗಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಕಾರ್ಯಪಡೆಯ ಔಚಿತ್ಯವನ್ನು ಪುನರ್​ ವಿಮರ್ಶೆ ಮಾಡಿ ರದ್ದು ಮಾಡಬೇಕು. ಇಲ್ಲದಿದ್ದರೆ ಪ್ರಜ್ಞಾವಂತ ನಾಗರಿಕರು ಜಿಲ್ಲೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net