ಅಮಿತ್ ಶಾ ಹೇಳಿಕೆಗೆ ವಿರೋಧ

20sirsi4 - PROTEST
Published on

ಶಿರಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಭೀಮ ಘರ್ಜನೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಶಾ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ ಮಿಂಟಿ ಮಾತನಾಡಿ, ಗೃಹಮಂತ್ರಿ ಅಮಿತ್ ಶಾ ಸಂಸತ್​ನಲ್ಲಿ ವಿರೋಧ ಪಕ್ಷದವರನ್ನು ಟೀಕಿಸುತ್ತಿರುವ ಸಂದರ್ಭದಲ್ಲಿ ಅಂಬೇಡ್ಕರ್ ಹೆಸರು ಹೇಳುವುದೊಂದು ಫ್ಯಾಶನ್ ಆಗಿ ಬಿಟ್ಟಿದೆ. ಅವರ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದ್ದರೆ ಪುಣ್ಯ ಬರುತ್ತಿತ್ತು ಎಂದು ಹೇಳುವ ಮೂಲಕ ರಾಷ್ಟ› ನಾಯಕ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದರು.

ರಾಜೇಶ ದೇಶಭಾಗ ಮಾತನಾಡಿದರು. ಪ್ರತಿಭಟನೆಯಲ್ಲಿ ತಿಲಕ್ ಹುಬ್ಬಳ್ಳಿ, ಅಮಿತ್ ಜೋಗಳೆಕರ್, ಸಂಜಯ ಮಡಗಾಂವಕರ್, ಪುನೀತ ಮರಾಠೆ, ಶ್ಯಾಮ ದೇಶಭಾಗ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net