ಜೆಜೆಎ೦ ಕಾಮಗಾರಿ ಪರಿಶೀಲನೆಗೆ ವಿರೋಧ; ಅಡ್ಡಿಪಡಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

13 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಮುರಕಟ್ಟಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆಗೆ ತೆರಳಿದ್ದ ಅಽಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ದೇವರಹುಬ್ಬಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಘಾಟಿನ, ಜಿ.ಪಂ. ಸಿಇಒ ಟಿ.ಕೆ. ಸ್ವರೂಪ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದೆ. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಲ್ಲ. ನೀರಿನ ಸಂಪರ್ಕ ಕಲ್ಪಿಸುವ ಪೈಪ್‌ಗಳನ್ನು ನಿಯಮಾವಳಿಯಂತೆ ಭೂಮಿಯ ಆಳಕ್ಕೆ ಅಳವಡಿಸಿಲ್ಲ. ಈ ಕುರಿತು ದೂರು ನೀಡಲಾಗಿತ್ತು. ಪರಿಶೀಲನೆಗೆ ತೆರಳಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಜಗದೀಶ ಪಾಟೀಲ, ಇತರರಿಗೆ ಗುತ್ತಿಗೆದಾರರ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ದೂರುದಾರ ಮತ್ತು ಗ್ರಾಮಸ್ಥರಲ್ಲಿ ಭಯ ಮೂಡಿಸಿದ್ದಾರೆ. ಅಕ್ರಮ ಮುಚ್ಚಿಹಾಕುವ ಉದ್ದೇಶದಿಂದ ಕಾಮಗಾರಿ ಪರಿಶೀಲನೆಗೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಗ್ರಾ.ಪಂ. ಸದಸ್ಯ ನಾಗರಾಜ ಘಾಟಿನ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net