

ಮಡಿಕೇರಿ:
ಬೆಂಗಳೂರಿನ ಕೊಡಗು ಗೌಡ ಸಮಾಜದಲ್ಲಿ ಬೆಂಗಳೂರಿನ ಎಲ್ಲಾ ಗೌಡ ಸಮಾಜ ಮತ್ತು ಒಕ್ಕಲಿಗ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಭಾನುವಾರ ನಡೆಯಿತು. ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಲ್ಯಾಂಡ್ ಬೇಡಿಕೆ ಹಾಗೂ ಡಾ.ಸುಬ್ರಮಣ್ಯಂ ಸ್ವಾಮಿ ಅವರು ಕೊಡವರ ಪರವಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಹೂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಕೊಡವರನ್ನು ಪರಿಶಿ?್ಟ ಜಾತಿ ಎಂದು ಪರಿಗಣಿಸಬೇಕೆನ್ನುವ ಒತ್ತಾಯವಿರುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು.
ಕೊಡಗಿನಲ್ಲಿ ಶೇ.೮೦ ರಿಂದ ೯೦ ರ?್ಟು ಗೌಡರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ಇತರೆ ಜನಾಂಗದವರು ವಾಸಿಸುತ್ತಿದ್ದಾರೆ. ಕೇವಲ ಅಲ್ಪಸಂಖ್ಯಾತ ವರ್ಗಕ್ಕೆ ಪ್ರತ್ಯೇಕ ರಾಜ್ಯ ಅಥವಾ ಸ್ವಾಯತ್ತತೆ ನೀಡುವುದು ಎ?್ಟು ಸಮಂಜಸ ಎಂದು ಸಭೆಯಲ್ಲಿ ಸಮಾಲೋಚಿಸಲಾಯಿತು. ಸರ್ಕಾರ ಇಂತಹ ಬೇಡಿಕೆಗಳಿಗೆ ಮಣಿದರೆ, ಮಣಿಪುರದಂತಹ ಜನಾಂಗೀಯ ಸಂಘ?ರ್ಕ್ಕೆ ಒಳಗಾಗುವ ಪರಿಸ್ಥಿತಿ ಉದ್ಭವವಾಗಬಹುದು ಎಂದು ಸಭೆ ಆತಂಕ ವ್ಯಕ್ತಪಡಿಸಿತು. ಹಾಗಾಗಿ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಎಲ್ಲರೂ ರಾಷ್ಟ್ರದ ಐಕ್ಯತೆಗಾಗಿ, ಸಂವಿಧಾನದ ಮೂಲಭೂತ ತತ್ವಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಎಲ್ಲರ ಅಸ್ತಿತ್ವದ ಉಳಿವಿಗಾಗಿ ರಾಜಕೀಯ, ಸಾಮಾಜಿಕ ಹಾಗೂ ಕಾನೂನಾತ್ಮಕವಾಗಿ ಹೋರಾಡಬೇಕಾಗಿದೆ ಎಂದು ಸಭೆ ನಿರ್ಧರಿಸಿತು.