ಪ್ರೀತಿಗೆ ವಿರೋಧ, ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ

bhdaravati rural police station
Published on

ಶಿವಮೊಗ್ಗ: ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತವಾದ ಕಾರಣದಿಂದ ಪ್ರೇಮಿಗಳಿಬ್ಬರು ಚಾನಲ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿ ನೀರು ಪಾಲಾಗಿದ್ದಾಳೆ.

ಭದ್ರಾವತಿ ತಾಲೂಕಿನ ಅಂತರಗಂಗೆ ಭೋವಿ ಕಾಲನಿಯ ನಿವಾಸಿ ಸ್ವಾತಿ (19) ನೀರು ಪಾಲಾಗಿದ್ದು, ಸೂರ್ಯ(20) ಬದುಕುಳಿದ್ದಾನೆ. ಭೋವಿ ಕಾಲನಿಯಲ್ಲಿ ನೆರೆಹೊರೆಯ ನಿವಾಸಿಗಳಾಗಿದ್ದು, ಕಳೆದ ಮೂರು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇಬ್ಬರ ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಿದ್ದು ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದ ಜೋಡಿ ಭಾನುವಾರ ಇರುವೆ ಪುಡಿ ಸೇವಿಸಿ ಬಳಿಕ ಅಂತರಗಂಗೆಯ ಉಕ್ಕುಂದದಲ್ಲಿರುವ ಚಾನಲ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಮರದ ದಿಮ್ಮಿಯ ಸಹಾಯದಿಂದ ಸಚಿನ್ ಪಾರಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ನೀರುಪಾಲಾಗಿರುವ ಸ್ವಾತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ದಿನದಿಂದ ಹುಡುಕಾಟ ನಡೆಸಿದ್ದಾರೆ. ಸ್ವಾತಿ ಪ್ರಥಮ ಪದವಿ ಓದುತ್ತಿದ್ದರೆ, ಸೂರ್ಯ ಕೆಲಸಕ್ಕೆ ಹೋಗುತ್ತಿದ್ದನು ಎನ್ನಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net