ಚಿಂತಾಮಣಿ: ರಜೆ ದಿನಗಳಲ್ಲೂ ಅಧಿಕಾರಿಗಳು ಮತ್ತು ಸಿಬ್ಬಂದಿ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚಿಂತಾಮಣಿ&ಬೆಂಗಳೂರು ರಾಜ್ಯ ಹೆದ್ದಾರಿಯ ಬೀಚಗೊಂಡನಹಳ್ಳಿ ಟೋಲ್ ಗೇಟ್ ಬಳಿ ಸರ್ಕಾರಿ ವಾಹನಗಳನ್ನು ತಡೆದು ಭಾನುವಾರ ಪ್ರತಿಭಟನೆ ನಡೆಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಡ್ಯಾನಿಯಲ್ ಮತ್ತು ಚಿಂತಾಮಣಿ ತಾಲೂಕು ಅಧ್ಯಕ್ಷ ಅಬ್ದುಲ್ ಖಯ್ಯೂಮ್ ನೇತೃತ್ವದಲ್ಲಿ ವಾಹನಗಳನ್ನು ತಡೆದು ಪ್ರಶ್ನಿಸಿದರು. ಈ ವೇಳೆ ವಾಹನಗಳ ಚಾಲಕರು, ಅಧಿಕಾರಿ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಮಾತಿಗೆ ಮಾತು ಬೆಳೆಯಿತು. ಪಟ್ಟು ಬಿಡದ ಕೆಆರ್ಎಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಡಾೆ ಉತ್ತರ ನೀಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.