ವಿಜಯಪುರ : ಗ್ರಾಮೀಣ ಬ್ಯಾಂಕುಗಳ ಖಾಸಗೀಕರಣಕ್ಕೆ ವಿರೋಧ

IMG-20220916-WA0137
ಗ್ರಾಮೀಣ ಬ್ಯಾಂಕುಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದಿಂದ ಶುಕ್ರವಾರ ವಿಜಯಪುರ ನಗರದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಿ.ಜಿ.ಗಾಂಧಿ, ಶಿವಾಜಿ ಇನಾಮದಾರ, ಸಿ.ಎ.ಗಂಟೇಪ್ಪಗೋಳ, ಸಾಗರ್ ಲೋಣಿ, ಸುನಿಲ್‌ನಾಯಕ, ಗಣೇಶ ಹಳ್ಳಿ, ಕವಿತಾ ಜಾಧವ ಇತರರಿದ್ದರು.
Published on

ವಿಜಯಪುರ : ಗ್ರಾಮೀಣ ಬ್ಯಾಂಕುಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದಿಂದ ಶುಕ್ರವಾರ ವಿಜಯಪುರ ನಗರದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೌಕರರ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಜಿ.ಗಾಂಧಿ ಮಾತನಾಡಿ, ಪ್ರವರ್ತಕ ಬ್ಯಾಂಕುಗಳು ಹಾಗೂ ಗ್ರಾಮೀಣ ಬ್ಯಾಂಕುಗಳು ಸರ್ಕಾರಗಳ ಷೇರುಗಳನ್ನು ಹೊಂದಿದ್ದು, ಸಂಪೂರ್ಣವಾಗಿ ಸರ್ಕಾರಿ ಒಡೆತನದ ಬ್ಯಾಂಕುಗಳಾಗಿ ದೇಶದಲ್ಲಿ ಗ್ರಾಮೀಣ ವಲಯದಲ್ಲಿ ಸೇವೆ ಸಲ್ಲಿಸುತ್ತಿವೆ. ಕೇಂದ್ರ ಸರ್ಕಾರ ಇತ್ತೀಚೆಗೆ ಗ್ರಾಮೀಣ ಬ್ಯಾಂಕುಗಳಿಗೆ ಸಾರ್ವಜನಿಕ ಬಂಡವಾಳ ಸಂಗ್ರಹಿಸಲು ಅಧಿಸೂಚನೆ ಹೊರಡಿಸಿದೆ. ಇದರ ಮೂಲಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಸಗಿ ಬಂಡವಾಳ ಹೆಚ್ಚಿಸಿ ಸರ್ಕಾರದ ಪಾಲನ್ನು ಕಡಿಮೆ ಮಾಡಿ, ಗ್ರಾಮೀಣ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ ಎಂದರು.

ಪ್ರಾಥಮಿಕವಾಗಿ ಕೇಂದ್ರ ಸರ್ಕಾರ ತನ್ನ ಒಡೆತನದ ಷೇರುಗಳನ್ನು ಖಾಸಗಿ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡಿ ಸಂಪೂರ್ಣವಾಗಿ ಗ್ರಾಮೀಣ ಬ್ಯಾಂಕುಗಳನ್ನು ಖಾಸಗಿ ಮಾಲೀಕತ್ವದ ಸುಪರ್ದಿಗೆ ಕೊಡಲು ಮುಂದಾಗಿದೆ. ಇದರಿಂದ ದೇಶದ ಗ್ರಾಮೀಣ ಆರ್ಥಿಕತೆ ಬಂಡವಾಳ ಶಾಹಿಗಳ ವಶವಾಗಿ ಗ್ರಾಮೀಣ ಜನತೆಯ ಆರ್ಥಿಕ ಚಟುವಟಿಕೆ ಮೇಲೆ ಬೃಹತ್ ಪ್ರಮಾಣದ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ತನ್ನ ಒಡೆತನದ ಬಹಳಷ್ಟು ಸಂಸ್ಥೆಗಳನ್ನು ಖಾಸಗಿ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡಿ ದೇಶದ ಇಡಿ ಹಣಕಾಸು ವಹಿವಾಟುಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಕೊಡುವುದರ ಮುಖಾಂತರ ದೇಶದ ಜನಸಾಮಾನ್ಯರನ್ನು ಕಡೆಗಣಿಸುತ್ತಾ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಒಂದು ವೇಳೆ ಕೇಂದ್ರ ಸರ್ಕಾರ ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಬರುವ ಚಳಿಗಾಲದ ಸಂಸತ್ ಅಧಿವೇಶನದ ಸಮಯದಲ್ಲಿ ಸಂಸತ್ತಿನ ಎದುರು ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಿವಾಜಿ ಇನಾಮದಾರ, ಸಿ.ಎ.ಗಂಟೇಪ್ಪಗೋಳ, ಸಾಗರ್ ಲೋಣಿ, ಸುನಿಲ್‌ನಾಯಕ, ಗಣೇಶ ಹಳ್ಳಿ, ಕವಿತಾ ಜಾಧವ, ದ್ರಾಕ್ಷಾಯಿಣಿ ಬಿರಾದಾರ, ಗಿರಿಜಾ ಪಾಟೀಲ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net