ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಪ್ರಸ್ತಾವನೆಗೆ ವಿರೋಧ

Opposition to proposal to license new liquor shops
Published on

ವಿಜಯಪುರ: ರಾಜ್ಯದಲ್ಲಿ ಹೊಸದಾಗಿ 389 ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿರುವುದನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಸೇನ್ ಖಂಡಿಸುತ್ತದೆ ಎಂದು ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 3ಸಾವಿರ ಜನಸಂಖ್ಯೆಯಿರುವ ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅದೇ ರೀತಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಕೂಡ ಮಧ್ಯದ ಅಂಗಡಿಗಳನ್ನು ತೆರೆಯುವ ಉದ್ದೇಶ ಹೊಂದಿದೆ.

ಇದು ಅತ್ಯಂತ ಜನವಿರೋಧಿ ಕ್ರಮವಾಗಿದ್ದು ಕೂಡಲೇ ಈ ಪ್ರಸ್ತಾವನೆಯನ್ನು ಕೈಬಿಡಬೇಕು. ಗ್ಯಾರಂಟಿ ಹೆಸರಿನಲ್ಲಿ ಜನರ ಆರೋಗ್ಯಕ್ಕೆ ಧಕ್ಕೆ ತರಬಾರದು.

ಕುಟುಂಬಗಳು ಬೀದಿಪಾಲಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲಿದೆ. ಪರವಾನಗಿ ನೀಡಿದಲ್ಲಿ ಯುವಕರಿಗೆ ದುಶ್ಚಟ ಕಲಿಸಲು ಅವಕಾಶ ನೀಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net