

ಮಡಿಕೇರಿ:
ಕುಶಾಲನಗರ ತಾಲೂಕು ರಸಲ್‌ಪುರದಲ್ಲಿ ಮೀಸಲು ಅರಣ್ಯ ಘೋಷಣೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆಯಲ್ಲಿ ಈ ವಿರೋಧ ವ್ಯಕ್ತವಾಯಿತು,
ರಸಲ್‌ಪುರ ಗ್ರಾಮದ ಸರ್ವೆ ನಂಬರ್ 49/1 ರಲ್ಲಿ 11 ಹೆಕ್ಟರ್ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಮೀಸಲು ಅರಣ್ಯ ಎಂದು ಘೋಷಿಸುವ ಕುರಿತು ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರಸ್ತಾಪಿಸಿದ ಸ್ಥಳೀಯರು ಊ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಆಕ್ಷೇಪಣೆ ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅತ್ತೂರು ಗ್ರಾಮದಲ್ಲಿ ನೀರಾವರಿ ನಿಗಮದಿಂದ ನೀಡಲಾದ 68 ಲಕ್ಷಗಳ ಕಾಮಗಾರಿ ಪೂರ್ಣಗೊಂಡಿದ್ದರೂ ಸೆಸ್ಕ್ ಇಲಾಖೆ ಕಳೆದ ಮೂರು ನಾಲ್ಕು ವರ್ಷಗಳಿಂದ ಕಾಮಗಾರಿಯ ಮಾಹಿತಿ ನೀಡುತ್ತಿಲ್ಲ. ಪೂರ್ಣಗೊಂಡ ಕಾಮಗಾರಿಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿರುವುದಿಲ್ಲ ಎಂದು ಗ್ರಾಮಸ್ಥ ರವಿ ಆರೋಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸೆಸ್ಕ್ ಅಧಿಕಾರಿಗಳು ಮೂರು ದಿನಗಳಲ್ಲಿ ಆ ಕಾಮಗಾರಿಯನ್ನು ಹಸ್ತಾಂತರಿಸುವುದಾಗಿ ತಿಳಿಸಿದರು.
ಬಸವನಹಳ್ಳಿ ಗ್ರಾಮದ ಮಹೇಶ್ ಮಾತನಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಆಸ್ತಿಯಲ್ಲಿ ಅನಧಿಕೃತವಾಗಿ ಕಟ್ಟಡಗಳ ನಿರ್ಮಿಸುತ್ತಿದ್ದು ಈ ಕಟ್ಟಡಗಳನ್ನು ಯಾಕೆ ತೆರವುಗೊಳಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಈ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ವಹಿಸಲಾಗುವುದು ಎಂದು ಪಿಡಿಒ ಮಾಹಿತಿ ನೀಡಿದರು
ಅತ್ತೂರು ಗ್ರಾಮವನ್ನು ಗ್ರಾಮಠಾಣಾ ಎಂದು ಘೋಷಣೆ ಮಾಡಿದ್ದು ಇದುವರೆಗೂ ಗ್ರಾಮ ಪಂಚಾಯಿತಿಗೆ ಗ್ರಾಮ ಠಾಣಾ ಹಸ್ತಾಂತರಿಸಿಲ್ಲ ಎಂದು ಆತ್ತೂರು ಗ್ರಾಮದ ರವಿ ಮತ್ತು ಜಗ ವಿಷಯ ಪ್ರಸ್ತಾಪಿಸಿದರು. ಈ ಬಗ್ಗೆ ಕ್ರಮ ವಹಿಸಿಸಲಾಗುವುದು ಎಂದು ಗ್ರಾಮ ಆಡಳಿತಾಧಿಕಾರಿ ಮಾಹಿತಿ ನೀಡಿದರು
ತೆಪ್ಪದ ಕಂಡಿಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುತ್ತಿದ್ದು ಇಲ್ಲಿಯ ನಿವಾಸಿಗಳಿಗೆ ಪುನರ್‌ವಸತಿ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಮಸ್ಥರು ಆಕ್ಷೇಪಿಸಿದರು. ಈ ಕುಟುಂಬಗಳಿಗೆ ವಸತಿ ಮತ್ತು ನಿವೇಶನ ಕಲ್ಪಿಸಲು ಈಗಾಗಲೇ ಗುಡ್ಡೆಹೊಸೂರು ಹಾಗೂ ಬಳ್ಳೂರು ಗ್ರಾಮದಲ್ಲಿ 2.5 ಎಕರೆ ಜಾಗ ಜಿಲ್ಲಾಧಿಕಾರಿಗಳು ಮಂಜೂರು ಮಾಡಿರುವ ಬಗ್ಗೆ ಸಭೆಗೆ ಮಾಹಿತಿ ನೀಡಲಾಯಿತು
ಸೆಸ್ಕ್, ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ನೀರಾವರಿ ಇಲಾಖೆ, ಕಂದಾಯ ಇಲಾಖೆ, ಪಶು ವೈದ್ಯಕೀಯ ಇಲಾಖೆ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಮಾಹಿತಿ ನೀಡಿದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಾದಪ್ಪ, ಆಡಳಿತ ಮಂಡಳಿಯ ಸದಸ್ಯರು, ಪಿಡಿಒ ಸುಮೇಶ್, ಕಾರ್ಯದರ್ಶಿ ಕುಮಾರಸ್ವಾಮಿ ಇತರರು ಇದ್ದರು.