ರಾಯಣ್ಣ ಪ್ರತಿಮೆ ತೆರವಿಗೆ ವಿರೋಧ

17-RNR-03
Published on

ರಾಣೆಬೆನ್ನೂರ: ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಹಾಲುಮತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಮಾಜದ ರಾಜ್ಯ ಸಮಿತಿ ಕಾರ್ಯದರ್ಶಿ ಮೃತ್ಯುಂಜಯ ಗುದಿಗೇರ ಮಾತನಾಡಿ, ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರ. ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅಂಥವರ ಮೂರ್ತಿಯನ್ನು ಜಿಲ್ಲಾಡಳಿತ ಏಕಾಏಕಿ ತೆರವುಗೊಳಿಸಿರುವುದು ಖಂಡನೀಯ. ಮೂರ್ತಿಯನ್ನು ಮರಳಿ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದರೆ ಈ ಕುರಿತು ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿರಸ್ತೇದಾರ್ ಎಂ.ಎನ್. ಹಾದಿಮನಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರಸಭೆ ಸದಸ್ಯರಾದ ಲಿಂಗರಾಜ ಕೋಡಿಹಳ್ಳಿ, ಹುಚ್ಚಪ್ಪ ಮೇಡ್ಲೇರಿ, ರಮೇಶ ಕರಡೆಣ್ಣನವರ, ಪ್ರಮುಖರಾದ ಹನುಮಂತಪ್ಪ ಕಬ್ಬಾರ, ನಿತ್ಯಾನಂದ ಕುಂದಾಪುರ, ಬಿ.ಪಿ. ಕುರಿಯವರ, ಆನಂದ ಹುಲ್ಬನಿ, ಕರಿಯಪ್ಪ ಹುಚ್ಚಣ್ಣನವರ, ಎಚ್.ಎನ್. ಕಂಬಳಿ, ಮರಿಯಪ್ಪ ಪೂಜಾರ, ಬಸವರಾಜ ಕಂಬಳಿ, ಬೀರಪ್ಪ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net