ಶೋಷಿತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ

Untitled design
ಯಲಬುರ್ಗಾದ ತಹಸೀಲ್ ಕಚೇರಿಯಲ್ಲಿ ಮಾಜಿ ಸಿಎಂ ದೇವರಾಜ ಅರಸು ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಗ್ರೇಡ್-2 ತಹಸೀಲ್ದಾರ್ ನಾಗಪ್ಪ ಸಜ್ಜನ್, ಬಿಸಿಎಂ ತಾಲೂಕು ಅಧಿಕಾರಿ ಶಿವಶಂಕರ ಕರಡಕಲ್, ಶಿರಸ್ತೇದಾರ್ ಎಂ.ದೇವರಡ್ಡಿ ಇದ್ದರು.
Published on

ಯಲಬುರ್ಗಾ :ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಸಿಎಂ ಡಿ.ದೇವರಾಜ ಅರಸು ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.


ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತ ಹಾಗೂ ಬಿಸಿಎಂ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಮರೆಯುವಂತಿಲ್ಲ ದೇವರಾಜ ಅರಸು ಅವರ ಕ್ರಾಂತಿಕಾರಕ ಯೋಜನೆಗಳು
ದೇವರಾಜ ಅರಸು ತಮ್ಮ ಆಡಳಿತ ಅವಧಿಯಲ್ಲಿ ಸಮಾಜಮುಖಿ ಕಾರ್ಯ ಕೈಗೊಳ್ಳುವ ಮೂಲಕ ಶೋಷಿತರ ಏಳಿಗೆಗಾಗಿ ಶ್ರಮಿಸಿದ್ದಾರೆ.

ಜತೆಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಸಮಾಜ ಸುಧಾರಣೆಗೆ ಕೊಡುಗೆ ನೀಡಿದ್ದಾರೆ. ಅಂತಹ ಮಹಾನ್ ನಾಯಕರು ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು.


ಬಿಸಿಎಂ ಇಲಾಖೆ ತಾಲೂಕು ಅಧಿಕಾರಿ ಶಿವಶಂಕರ ಕರಡಕಲ್ ಮಾತನಾಡಿದರು. ಗ್ರೇಡ್-2 ತಹಸೀಲ್ದಾರ್ ನಾಗಪ್ಪ ಸಜ್ಜನ್, ಶಿರಸ್ತೇದಾರ್ ಎಂ.ದೇವರಡ್ಡಿ, ಸಮಾಜ ಕಲ್ಯಾಣ ಅಧಿಕಾರಿ ವಿ.ಕೆ.ಬಡಿಗೇರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ, ಪ್ರಮುಖರಾದ ಉಮಾ ಹಿರೇಮಠ, ದಾದಾಪೀರ್, ಶಂಭುಲಿಂಗ, ಶ್ರೀ ಧರಗೌಡ, ನಿಲಯ ಪಾಲಕರು, ಇಲಾಖೆ ಸಿಬ್ಬಂದಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net