

ರಾಯಚೂರು: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕರ ವಿರೋ ನೀತಿಯನ್ನು ಕೈಬಿಡಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದಕಲು ಅವಕಾಶ ನೀಡುವ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಕಾರಕ್ಕೆ ಬಂದು 10 ವರ್ಷಗಳಾದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 2 ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಗೂ ಬೆಂಬಲ ಬೆಲೆ ಕಾನೂನು ರಚಿಸುವ ಭರವಸೆಯನ್ನು ಈಡೇರಿಸಿಲ್ಲ. ಆರೋಗ್ಯ, ಶಿಕ್ಷಣಕ್ಕೆ ಅನುದಾನ ಹೆಚ್ಚಳ ಮಾಡುವ ಬದಲು ಕಡಿತ ಮಾಡಲಾಗಿದೆ.
ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣ ಕೈಬಿಡಬೇಕು. ಕೃಷಿ ಕಾರ್ಮಿಕರಿಗೆ ಕಲ್ಯಾಣ ಯೋಜನೆ ರೂಪಿಸಬೇಕು. ಉದ್ಯೋಗ ಖಾತ್ರಿ ಯೋಜನೆಯ ಕೂಲಿಯನ್ನು 600 ರೂ.ಗೆ ಹೆಚ್ಚಿಸಬೇಕು. ಬಯೋಮೆಟ್ರಿಕ್ ಪದ್ಧತಿ ಕೈಬಿಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಖಾತ್ರಿ ಪಡಿಸಬೇಕು.
ಗುತ್ತಿಗೆ, ಹೊರಗುತ್ತಿಗೆ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ನಿಲ್ಲಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಲು ಶಾಸನ ತರಬೇಕು. ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಪದಾಕಾರಿಗಳಾದ ಕೆ.ಜಿ.ವೀರೇಶ, ಎನ್.ಎಸ್.ವೀರೇಶ, ಚನ್ನಬಸವ ಜಾನೇಕಲ್, ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಖಾಜಾ ಅಸ್ಲಂ ಅಹ್ಮದ್, ಎಚ್.ಪದ್ಮಾ, ಗೋಕರಮ್ಮ, ಈರಮ್ಮ, ಆಂಜಿನೇಯ ಕುರುಬದೊಡ್ಡಿ, ರಂಗನಗೌಡ, ವರಲಕ್ಷ್ಮಿ ಪಾಲ್ಗೊಂಡಿದ್ದರು.