ನಾಳೆಯಿಂದ 13 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್

rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರಾವಳಿ, ಮಲೆನಾಡಿನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಶಿವಮೊಗ್ಗದ ಆಗುಂಬೆ, ಯಾದಗಿರಿ, ಕಲಬುರಗಿ, ದಣ ಕನ್ನಡದ ಮಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೀದರ್​, ಕಲಬುರಗಿ, ಕೊಪ್ಪಳ, ಬಳ್ಳಾರಿ,ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.1ರಿಂದ ಸೆ.2ರವರೆಗೆ ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ನೀಡಿದೆ. ಗಂಟೆಗೆ 35-45 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ, ಕರಾವಳಿ ಉದ್ದಕ್ಕೂ ಮತ್ತು ಹೊರೆಗೆ ಚಾಲ್ತಿಯಲ್ಲಿ ಇರಲಿದೆ.

ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ,ತುಮಕೂರಿನಲ್ಲಿ ಸೆ.1ರಂದು ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ,ಹಾಸನ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿ.ಸೆ ಮತ್ತು 20 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net